ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ
0Shares

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಯುಕ್ತ ಸಹಕಾರಿಯ ಮಾನ್ಯ ಅಧ್ಯಕ್ಷರಾದ ಶ್ರೀ ಜಿ.ನಂಜನಗೌಡ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಯುಕ್ತ ಸಹಕಾರಿಯ ಮಾನ್ಯ ನಿರ್ದೇಶಕರಾದ
ಶ್ರೀ ಮಂಜುನಾಥ್ ಎಸ್.ಕೆ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಂಯುಕ್ತ ಸಹಕಾರಿ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ ಭಟ್,ಹಾಗೂ ವೃತ್ತಿಪರ ನಿರ್ದೇಶಕರಾದ ಶ್ರೀ ಮಹದೇವ ಸ್ವಾಮಿ ಹಾಗೂ ಉಡುಪಿ ಜಿಲ್ಲಾ ಸೌಹಾರ್ದ ಓಕ್ಕೂಟ ಇದರ ಅಧ್ಯಕ್ಷರಾದ ಶ್ರೀ ಜಗನ್ನಾಥ ಶೆಟ್ಟಿ ಮತ್ತು ಶ್ರೀ* ಗುರುಪ್ರಸಾದ್ ಬಂಗೇರ , ಪ್ರಾಂತೀಯ ವ್ಯವಸ್ಥಾಪಕರು, ಮೈಸೂರು ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಶ್ರೀ ವಿಜಯ್ ಬಿ.ಎಸ್ ಹಾಗೂ ಪ್ರಾಸ್ತಾವಿಕ ನುಡಿಗಳನ್ನು ಮಾನ್ಯ ಪ್ರಾಂತೀಯ ಅಧಿಕಾರಿಗಳಾದ ಶ್ರೀ ಗುರುಪ್ರಸಾದ್ ಬಂಗೇರ ರವರು ನಡೆಸಿಕೊಟ್ಟರು.

ಕಾರ್ಯಕ್ರಮದ ಉದ್ಘಾಟನೆಯ ನಂತರ ಸಂಯುಕ್ತ ಸಹಕಾರಿಯ ಮಾನ್ಯ ಅಧ್ಯಕ್ಷರಾದ ಶ್ರೀ ಜಿ. ನಂಜನಗೌಡ ರವರು ಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ನಂತರ ಸೌಹಾರ್ದ ಸಹಕಾರಿಗಳೊಂದಿಗೆ ಸಮಾಲೋಚನೆಯನ್ನು ನಡೆಸಿದರು.

ಮಧ್ಯಾಹ್ನದ ಅವಧಿಯಲ್ಲಿ ದಾವಾ ದಾಖಲಾತಿ, ಸಾಲದ ದಾಖಲಾತಿ ನಿರ್ವಹಣೆ ಕುರಿತು ಶ್ರೀ ಜಿತಿನ್ ಜೀಬು ಇವರು ಮಾಹಿತಿ ನೀಡಿದರು ನಂತರದ ಅವದಿಯಲ್ಲಿ ಸಂಯುಕ್ತ ಸಹಕಾರಿ ಯಿಂದ ಹೊರಡಿಸಿದ ಸುತ್ತೋಲೆಗಳ ಕುರಿತು ಸೌಹಾರ್ದ ಅಭಿವೃದ್ಧಿ ಅಧಿಕಾರಿಗಳು ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಜಿಲ್ಲೆಯ 117 ಸೌಹಾರ್ದ ಸಹಕಾರಿಗಳಿಂದ 203 ಪ್ರತಿನಿಧಿಗಳು ಭಾಗವಹಿಸಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now