ಕಾವೇರಿಗಾಗಿ ಹೋರಾಟ : ಆಗಸ್ಟ್ 13 ರಂದು ಕರ್ನಾಟಕ ಬಂದ್

ಕಾವೇರಿಗಾಗಿ ಹೋರಾಟ : ಆಗಸ್ಟ್ 13 ರಂದು ಕರ್ನಾಟಕ ಬಂದ್
0Shares

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಹಾಗೂ ರಾಜ್ಯದ ಹಿತರಕ್ಷಣೆಗಾಗಿ ಆಗಸ್ಟ್ 13 ರಂದು (ಗುರುವಾರ) ‘ಕರ್ನಾಟಕ ಬಂದ್’ ನಡೆಸಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ ಘೋಷಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಮುಂದಿನ ಪ್ರಮುಖ ಹೋರಾಟಗಳ ರೂಪುರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ವಾಟಾಳ್ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿವಿಧ ಕನ್ನಡಪರ ಸಂಘಟನೆಗಳ ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯದ ನೇತೃತ್ವದಲ್ಲಿ ಮಹತ್ವದ ತುರ್ತು ಸಭೆಯನ್ನು ನಗರದ ವುಡ್ ಲ್ಯಾಂಡ್‌ ಹೋಟೆಲ್‌ನಲ್ಲಿ ನಡೆಸಲಾಯಿತು.

ಕಾವೇರಿ ನೀರು ನಿಯಂತ್ರಣ ಮಂಡಳಿಯು (ಸಿಡಬ್ಲೂಆರ್‌ಸಿ) ರಾಜ್ಯದ ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ಪ್ರತಿ ದಿನ 3,500 ಕ್ಯೂಸೆಕ್ 15 ದಿನಗಳ ಕಾಲ ಒಟ್ಟು ಸುಮಾರು 6 ಟಿಎಂಸಿ ನೀರು ಹರಿಸುವಂತೆ ಆದೇಶಿಸಿದೆ. ಈ ಆದೇಶದಿಂದಾಗಿ ನಾಡಿನ ಅಪಾರ ರೈತರು, ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ರಾಜ್ಯದಲ್ಲಿ ಈಗಾಗಲೇ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಬರಗಾಲದ ಲಕ್ಷಣ ಕಾಣಿಸುತ್ತಿದೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಹೋರಾಟಕ್ಕೆ ಮುಂದಾಗಿವೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now