ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ
0Shares

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಭಕ್ತರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಮನವಿ ಸಲ್ಲಿಸಿದರು.

ದೇವಸ್ಥಾನದ ಸುರಕ್ಷತೆಯ ದೃಷ್ಟಿಯಿಂದ ರಸ್ತೆ ಹಾಗೂ ಕಾಂಪೌಂಡ್ ನಿರ್ಮಾಣ ಆಗಬೇಕು.

ಕಾಮಗಾರಿ ನಡೆಸುವುದಕ್ಕೆ ಅನಗತ್ಯ ಆಕ್ಷೇಪ ವ್ಯಕ್ತಪಡಿಸಿ, ಕಾಮಗಾರಿ ನಡೆಯದಂತೆ ತಡೆಯುವ ಪ್ರಯತ್ನವಾಗುತ್ತಿದೆ. ಭಕ್ತರಿಗೆ ಸುಗಮವಾಗಿ ಮತ್ತು ಸುರಕ್ಷಿತವಾಗಿ ಸಂಚರಿಸಲು ನೂತನ ರಸ್ತೆ ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ತ್ವರಿತವಾಗಿ ಕಾಮಗಾರಿ ನಡೆಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ದೇವಸ್ಥಾನದ ಭಕ್ತರಾದ ರೋಹನ್ ರಾಜ್, ನಡುಬೈಲು ಗುತ್ತು ಗೋಪಾಲಕೃಷ್ಣ ಪೂಜಾರಿ, ಹರೀಶ್ ಬಂಗೇರ, ರಕ್ಷಿತ್, ತೇಜಸ್, ಕೃತಿಕ್ ಮತ್ತಿತರರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now