
ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ 2023–25ನೇ ಸಾಲಿನ ಎಂ.ಸಿ.ಎ (Master of Computer Applications) ಸ್ನಾತಕೋತ್ತರ ಪದವಿಯಲ್ಲಿ ಅನನ್ಯ ಬಿ. ಎಸ್. ಅವರು ಶೇ. 94 ಅಂಕಗಳನ್ನು ಗಳಿಸಿ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಅನನ್ಯ ಅವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೆರ್ಲದ ಶ್ರೀ ಸತ್ಯನಾರಾಯಣ ಹೈಸ್ಕೂಲ್ನಲ್ಲಿ ಪೂರ್ಣಗೊಳಿಸಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 90 ಅಂಕಗಳನ್ನು ಗಳಿಸಿದ್ದರು. ಬಳಿಕ ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಉನ್ನತ ಶಿಕ್ಷಣಕ್ಕಾಗಿ ಪುತ್ತೂರಿನ ವಿವೇಕಾನಂದ ಕಾಲೇಜು ಸೇರಿ ಬಿ.ಸಿ.ಎ (BCA) ಪದವಿಯಲ್ಲಿ ಶೇ. 93 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆ ಮಾಡಿದರು.
ಅದರ ನಂತರ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಎಂ.ಸಿ.ಎ ಸ್ನಾತಕೋತ್ತರ ಪದವಿಯನ್ನು ಅಭ್ಯಾಸ ಮಾಡಿ ಶೇ. 94 ಅಂಕಗಳನ್ನು ಗಳಿಸಿ ವಿಶ್ವವಿದ್ಯಾಲಯದ ದ್ವಿತೀಯ ರ್ಯಾಂಕ್ ಪಡೆಯುವ ಮೂಲಕ ತಮ್ಮ ಪ್ರತಿಭೆ, ಪರಿಶ್ರಮ ಮತ್ತು ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಸಾಧನೆಯು ಅವರ ಕುಟುಂಬಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ.
ಅನನ್ಯ ಬಿ. ಎಸ್. ಅವರ ಈ ಅಪೂರ್ವ ಸಾಧನೆಗೆ ಬಂಧು-ಬಳಗ, ಶಿಕ್ಷಕರು, ಸ್ನೇಹಿತರು ಹಾಗೂ ಸಮಾಜದ ಗಣ್ಯರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now