
ಹೆಬ್ರಿ: ಕರ್ನಾಟಕ ಸರ್ಕಾರದ ಜಿಲ್ಲಾ ಅಂತರ್ಜಲ ಕಛೇರಿ (ಅಂತರ್ಜಲ ನಿರ್ದೇಶನಾಲಯ, ಉಡುಪಿ ರಜತಾದ್ರಿ) ಹಾಗೂ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಕಾಬೆಟ್ಟು ಶಾಲೆಯಲ್ಲಿ ನಡೆದ ಈ ಸ್ಪರ್ಧೆಯು “ಅಂತರ್ಜಲ ಸಂರಕ್ಷಣೆ ಮತ್ತು ಸದ್ಬಳಕೆ” ಎಂಬ ವಿಷಯದ ಕುರಿತಾಗಿತ್ತು. ಹಿರಿಯ ಭೂವಿಜ್ಞಾನಿಗಳ ನೇತೃತ್ವದಲ್ಲಿ ಈ ಜಾಗೃತಿ ಕಾರ್ಯಕ್ರಮ ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಾಧಕ ವಿದ್ಯಾರ್ಥಿನಿಯನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ ಶೆಟ್ಟಿ ಮತ್ತು ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅವರು ಆಡಳಿತ ಮಂಡಳಿ ಹಾಗೂ ಶಾಲೆಯ ಪರವಾಗಿ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now