ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ನಿಧನ

ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ನಿಧನ
0Shares

ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ಸಾವು ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸ್‌ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ಮೂಲದ, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್‌ ಶೆಟ್ಟಿ (44) ಎಂದು ಗುರುತಿಸಲಾಗಿದೆ.

ಆಗಸ್ಟ್ 9ರಂದು ಮಂಗಳೂರಿನಿಂದ ಬಸ್ ಮೂಲಕ ಮಂತ್ರಾಲಯಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿ, ಅಲ್ಲಿಂದ ವಾಪಸ್‌ ಆಗುವ ವೇಳೆ ಘಟನೆ ನಡೆದಿದೆ. ಆಗಸ್ಟ್ 10ರ ರಾತ್ರಿ ಬಸ್ ಬಳ್ಳಾರಿಯ ಎಪಿಎಂಸಿ ಬಸ್‌ ನಿಲ್ದಾಣದಲ್ಲಿ ತಂಗಿತ್ತು. ರಾತ್ರಿ ಸುಮಾರು 2.30ರ ವೇಳೆಗೆ ಬಸ್ಸಿನಿಂದ ಇಳಿದ ಸಂದೀಪ್ ಶೆಟ್ಟಿ ನಿಲ್ದಾಣದಲ್ಲಿ ಕುಳಿತಿದ್ದರು. ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now