
ಕುಂದಾಪುರ :ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಕುಂದಾಪ್ರಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸ್ಥಳೀಯ ಭಾಷೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಜಂಟಿ ವ್ಯವಸ್ಥಾಪಕ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಕುಂದಾಪ್ರ ಭಾಷೆ ಬರೇ ಭಾಷೆಯಲ್ಲ ಅದೊಂದು ಬದುಕು. ಕುಂದಾಪ್ರ ಪರಿಸರದ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಪರಿಚಯಿಸಿದ ವಿಶಿಷ್ಟ ಭಾಷೆ ನಮ್ಮ ಕುಂದಾಪ್ರ ಭಾಷೆಯಾಗಿದೆ. ಅಮೇರಿಕಾ ದುಬೈ ಮುಂತಾದ ಕಡೆ ಕುಂದಾಪ್ರ ಭಾಷೆ ತನ್ನ ಅಸ್ತಿತ್ವವನ್ನು ಮೆರೆದಿದೆ. ಇಂತಹ ಜನ ಸಂಸ್ಕೃತಿಯನ್ನು ಹೊತ್ತು ಮೆರೆಯುವ ಭಾಷೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದರು.ಶಾಲೆಯ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯೋಪಾಧ್ಯಾಯರು, ಸಂಯೋಜಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಕುಂದಾಪ್ರ ಕನ್ನಡದ ಸೊಗಡು, ವೈಶಿಷ್ಟ್ಯ ಮತ್ತು ಸ್ಥಳೀಯ ಭಾಷೆಯ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಭಾಷೆಯಲ್ಲಿ ವಿವಿಧ ಚಟುವಟಿಕೆಗಳು, ಸಂಭಾಷಣೆಗಳು, ನುಡಿಸ್ತುತಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ತಮ್ಮ ಸ್ಥಳೀಯ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ಹೆಮ್ಮೆ ಮತ್ತು ಅಭಿಮಾನವನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು. ವಿದ್ಯಾರ್ಥಿನಿ ಸಮನ್ವಿಹಾಗೂ ಸ್ಮರಣಿ ಜಂಟಿಯಾಗಿ ಕಾರ್ಯಕ್ರಮ ನಿರೂಪಿಸಿದ್ದು, ಕು. ಪ್ರಣಮ್ಯ ವಂದಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now