
ಉಡುಪಿ: ಮನೆಯಲ್ಲಿ ಪೂಜಾ ಮನೆ ಇದ್ದಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಅಧ್ಯಕ್ಷ ಡಾ. ಮಾನಸ ಹೇಳಿದರು.
ಅವರು ಇಂದು ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನದ ಅನುಷ್ಠಾನ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೊಡವೂರಿನ ಭಾಮಾ ನಿಲಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕುವ ಕಲೆ ಪುಸ್ತಕ ಹೇಳಿಕೊಡುತ್ತದೆ ಪುಸ್ತಕವನ್ನು ಪ್ರೀತಿಸಿದಾಗ ಬದುಕು ಮತ್ತಷ್ಟು ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ನಡೆಸಲಾಗುತ್ತಿದೆ
ಎಂದರು.
ಕಾಲೇಜು ವಿದ್ಯಾರ್ಥಿಗಳಿಗೆ ತಿಂಗಳ ತಿರುಳು ಕಾರ್ಯಕ್ರಮದ ಮೂಲಕ ಅನೇಕ ಸಾಹಿತಿಗಳ ಪುಸ್ತಕ ಪರಿಚಯ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು. ಭಕ್ತಿಯ ಭವನ ಭಯದ ಭವನವಾಗದೆ, ಜ್ಞಾನದ ಭವನವಾಗಬೇಕು ಎಂದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now