
ಉಡುಪಿ: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65) ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಿಜೆಪಿ ಹಿರಿಯ ನಾಯಕರುಗಳಾಗಿದ್ದ ಡಾ. ವಿ.ಎಸ್. ಆಚಾರ್ಯ ಹಾಗೂ ಸೋಮಶೇಖರ್ ಭಟ್ ಅವರ ನಿಕಟವರ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ ಆಗಿದ್ದ ಸುರೇಶ್ ಶೇರಿಗಾರ್ ಅವರ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆ ಶ್ಲಾಘನೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಬಂಧು ಮಿತ್ರರಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನೀಲ್ ಕುಮಾರ್, ಯತ್ಪಾಲ್ ಎ.ಸುವರ್ಣ, ಕಿರಣ್ ಕುಮಾರ್ ಕೊಡ್ಲಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರಾದ ಕೆ.ಉದಯಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ್ ಹೆಗ್ಡೆ, ಎಸ್.ಡಿ. ರತ್ನಾಕರ್ ಹೆಗ್ಡೆ, ಕುಯಿಲಾಡಿ ಅ. ಸುವರ್ಣ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಸಂತಾಪ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now