
ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಆಯೋಜಿಸಿದ್ದ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸುವ ಮೂಲಕ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ರಮೇಶ್ ಶೆಟ್ಟಿ ಉಪ್ಪೂರು ಅವರು ಧ್ವಜ ಹಸ್ತಾಂತರಿಸುವ ಮೂಲಕ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಲ್ಸನ್ ಫೆರ್ನಾಂಡಿಸ್ ಹಾಗೂ ಯೋಗಿಶ್ ಶೆಟ್ಟಿ ಬಾಲಾಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮವು ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16ರಂದು ಕಾರ್ಯಕ್ರಮ ನಡೆಯಿತು.

ತುಳುನಾಡಿನ ಸಂಸ್ಕೃತಿ, ಸಂಸ್ಕಾರ, ಆಚಾರ–ವಿಚಾರ, ಜಾನಪದ ಕಲೆಗಳು ಹಾಗೂ ವಿಶಿಷ್ಟ ಜೀವನ ಪದ್ಧತಿಗಳು ಇಡೀ ದೇಶವೇ ಹೆಮ್ಮೆಪಡುವಂತಹ ಶ್ರೀಮಂತ ಪರಂಪರೆಯಾಗಿದೆ. ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ಈ ಅಮೂಲ್ಯ ಸಾಂಸ್ಕೃತಿಕ ಸಂಪತ್ತನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜೆಡಿಎಸ್ ರಾಜ್ಯ ಮುಖಂಡ ಸೂರಜ್ ನಾಯಕ್ ಸೋನಿ ಹೇಳಿದರು.

ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಆಯೋಜಿಸಿದ್ದ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ಹೊಂಬಾಳೆ ಅರಳಿಸಿ ಮಾತನಾಡಿದ ಅವರು, ತುಳುನಾಡಿನ ಸಂಸ್ಕೃತಿ ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ನಮ್ಮ ನೆಲ, ನುಡಿ, ಬದುಕು, ಪ್ರಕೃತಿ ಹಾಗೂ ಸಾಮಾಜಿಕ ಸಂಬಂಧಗಳೊಂದಿಗೆ ಬೆಸೆದುಕೊಂಡಿರುವ ವಿಶಿಷ್ಟ ಜೀವನ ಪರಂಪರೆಯಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಯುವ ಪೀಳಿಗೆಯಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ತುಳುನಾಡಿನ ಸಂಪ್ರದಾಯ, ಪದ್ಧತಿ, ಸಂಸ್ಕಾರ ಹಾಗೂ ಆಚಾರ–ವಿಚಾರಗಳು ವಿಶಿಷ್ಟವಾಗಿದ್ದು, ಜಗತ್ತೇ ಮೆಚ್ಚುವಂತಹ ಶ್ರೀಮಂತ ಪರಂಪರೆಯನ್ನು ಹೊಂದಿವೆ.ಎಂದರು
ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆ ಪ್ರಾಧಾನ್ಯತೆ ನೀಡುತ್ತಿರುವುದು ಸ್ವಾಗತಾರ್ಹ. ತುಳುನಾಡಿನ ಕಲೆ, ಸಾಹಿತ್ಯ, ಜಾನಪದ ಹಾಗೂ ಸಾಂಸ್ಕೃತಿಕ ವೈಭವವನ್ನು ಉಳಿಸಿ ಬೆಳೆಸಲು ಸಂಘಟಿತ ಪ್ರಯತ್ನ ಅಗತ್ಯ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now