ಪೊಲೀಸ್ ಠಾಣೆಗಳ ಸಿಸಿಟಿವಿ ಒಂದು ನಿಮಿಷವೂ ಸ್ಥಗಿತಗೊಳ್ಳುವಂತಿಲ್ಲ : ಹೈಕೋರ್ಟ್

ಪೊಲೀಸ್ ಠಾಣೆಗಳ ಸಿಸಿಟಿವಿ ಒಂದು ನಿಮಿಷವೂ ಸ್ಥಗಿತಗೊಳ್ಳುವಂತಿಲ್ಲ : ಹೈಕೋರ್ಟ್
0Shares

ಬೆಂಗಳೂರು : ಪೊಲೀಸ್‌ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾಗಳು ಒಂದು ನಿಮಿಷವೂ ಸ್ಥಗಿತಗೊಳ್ಳದೆ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಮತ್ತು ರಾಜ್ಯದಾದ್ಯಂತ ಸಿಸಿಟಿವಿ ವ್ಯವಸ್ಥೆಗಳ ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ಲೈವ್-ಟ್ರ್ಯಾಕ್ ಮಾಡುವಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿದೆ.

ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಕಿರುಕುಳ ಆರೋಪ ಪ್ರಕರಣದಲ್ಲಿ ಕಳೆದ 11 ತಿಂಗಳಿನಿಂದ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದಿದ್ದ ಪೊಲೀಸರ ಬೇಜವಾಬ್ದಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇದು ಇಲಾಖೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸುತ್ತದೆ ಎಂದಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಠಾಣೆಗಳ ಸಿಸಿಟಿವಿಯನ್ನು ಕಡ್ಡಾಯವಾಗಿ ಲೈವ್ ಟ್ರ್ಯಾಕ್ ಮಾಡಲು ನಿರ್ದೇಶಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now