
ಉಡುಪಿ: ತಂದೆ-ತಾಯಿ ತನಗೆ ಮಾನಸಿಕ ಹಿಂಸೆ
ನೀಡುತ್ತಿದ್ದರು ಎಂಬ ಕಾರಣಕ್ಕೆ ಮಗನೇ ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ.
ಕೊಲೆಯಾದವರನ್ನು ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಎಂದು ಗುರುತಿಸಲಾಗಿದೆ. ಇವರ ಪುತ್ರ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಾಹಿದ್ ಅಲಿ 24/08/2026ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ 112ಕ್ಕೆ ಕರೆ ಮಾಡಿ, ತನ್ನ ತಂದೆ-ತಾಯಿ ಪ್ರತಿನಿತ್ಯ ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದ ಹಿನ್ನೆಲೆಯಲ್ಲಿ 23/08/2026ರ ರಾತ್ರಿ ಸುಮಾರು 7 ಗಂಟೆಗೆ ಅವರನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮೆಹಬೂಬ್ ಅಲಿ ಹಾಗೂ ಸಂಶದ್ ಬೇಗಂ ಅವರನ್ನು ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 161/2026, ಕಲಂ 103 BNS ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now