ಬ್ರಹ್ಮಾವರ: ಯುವ ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ

ಬ್ರಹ್ಮಾವರ: ಯುವ ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ
0Shares

ಬ್ರಹ್ಮಾವರ: ಯುವ ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಮೃತ ಯುವತಿಯನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ.

ಅವರು ಬೆಂಗಳೂರಿನಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿದ್ದು, ಯಾವುದೋ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ತಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now