ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ SCDCC ಬ್ಯಾಂಕ್ “ಸಾಧನಾ ಪ್ರಶಸ್ತಿ”

ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ SCDCC ಬ್ಯಾಂಕ್ “ಸಾಧನಾ ಪ್ರಶಸ್ತಿ”
0Shares

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರು 2025- 2026 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದು ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘಗಳಿಗೆ ನೀಡುತ್ತಿರುವ “ಎ” ವರ್ಗದ ಸಹಕಾರಿ ಸಂಘಗಳಲ್ಲಿ ‘ಜಿಲ್ಲಾ ಬ್ಯಾಂಕಿನ ಸಾಧನಾ ಪ್ರಶಸ್ತಿಗೆ’ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸ್ತುತ ಸಾಲಿನಲ್ಲಿ ಆಯ್ಕೆಯಾಗಿರುತ್ತದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಅಧ್ಯಕ್ಷರಾದ ಮಾನ್ಯ ಡಾ। ಎಂ.ಎನ್.ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಎನ್.ರಮೇಶ ಶೆಟ್ಟಿ ರವರನ್ನು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಸಂದೀಪ ಶೆಟ್ಟಿರವರನ್ನು ಸನ್ಮಾನಿಸಿ, ಪ್ರಶಸ್ತಿ ಪತ್ರ ಗೌರವ ಸ್ಮರಣಿಕೆ ನೀಡಿ ಗೌರವಿಸಿದರು. ಸಂಘವು ಉಪ್ಪೂರು ಮತ್ತು ಹಾವಂಜೆಯಲ್ಲಿ ಕೇವಲ ಎರಡು ಗ್ರಾಮದ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು ವರದಿ ವರ್ಷದಲ್ಲಿ 400 ಕೋಟಿ ಮೀರಿ ವ್ಯವಹಾರ ನಡೆಸಿ, 103 ಕೋಟಿ ಮೀರಿ ಠೇವಣಾತಿ ಸಂಗ್ರಹ, 74 ಕೋಟಿ ಸಾಲ ವಿತರಣೆ, 1ಕೋಟಿ 12ಲಕ್ಷ ಲಾಭ ಗಳಿಸಿದ ಸಾಧನೆಯನ್ನು ಪ್ರಶಂಶಿಸಲಾಯಿತು. ಸನ್ಮಾನ ಸಮಾರಂಭದ ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ವಲಯ ಮೇಲ್ವಿಚಾರಕರಾದ ಕೆ . ರಾಜಾರಾಮ ಶೆಟ್ಟಿ ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now