
ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ, ಬಿಲ್ಲವ ಯುವ ವೇದಿಕೆ ಬ್ರಹ್ಮಾವರ ಇವರ ವತಿಯಿಂದ ಬಿಲ್ಲವ ಯುವ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಂದು ದಿನಾಂಕ 28-08-2026ರಂದು ನಾರಾಯಣ ಗುರು ಸಭಾಭವನ ಬ್ರಹ್ಮಾವರ ಇಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿಯ ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಯುವಕರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಮಾಜದ ಒಗ್ಗಟ್ಟು ಹಾಗೂ ಅಭಿವೃದ್ಧಿಗೆ ಶ್ರಮಿಸಬೇಕು. ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸಂಘದ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಿ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ಬಿಲ್ಲವ ಯುವ ವೇದಿಕೆಯ ನೂತನ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿ ಸಂಘದ ಅಭಿವೃದ್ಧಿಗೆ ಬದ್ಧತೆಯನ್ನು ವ್ಯಕ್ತಪಡಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now