
2017 ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಮತ್ತು ಉದ್ಯಾವರ ಗ್ರಾಮದ ಅಭಿವೃದ್ಧಿಯ ಹರಿಕಾರ ಮಂಜುನಾಥ ಉದ್ಯಾವರ 14 ನೇ ಪುಣ್ಯ ತಿಥಿ ಮಂಜಣ್ಣನ ನೆನಪು – 14 ತಾ. 30.08.2026 ಭಾನುವಾರ ಸಂಜೆ ಗಂಟೆ 5.00 ಕ್ಕೆ ಉದ್ಯಾವರ ,ಮೇಲ್ಪೇಟೆ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಲಿದೆ.
ಜರಗಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಎಂ.ಎ. ಗಫೂರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಎಂ. ಮಂಜುನಾಥ ಪೂಜಾರಿ , ಪಡುಬಿದ್ರಿ ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ಶ್ರೀ ವೈ. ಸುಧೀರ್ ಕುಮಾರ್ ಮತ್ತು ಉದ್ಯಾವರ ಶಂಭುಕಲ್ಲು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಉಲ್ಲಾಸ ಆರ್.ಶೆಟ್ಟಿ ಭಾಗವಹಿಸಲಿದ್ದಾರೆ
ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಾಭಿ ಥಿಯೇಟರ್ – ಮಂಗಳೂರು ಇವರಿಂದ ವಿಲಿಯಂ ಷೇಕ್ಸ್ಪಿಯರ್ನ ಮ್ಯಾಕ್ಬೆತ್ ನ ರೂಪಾಂತರ ಮಾರಿ ಕಾಡ್ ( ಕನ್ನಡ : ಡಾ. ಚಂದ್ರಶೇಖರ ಕಂಬಾರ , ತುಳು : ಡಾ. ಮೀನಾಕ್ಷಿ ರಾಮಚಂದ್ರ, ನಿರ್ದೇಶನ : ರೋಹಿತ್ ಎಸ್. ಬೈಕಾಡಿ ) ತುಳು ಆಪ್ತರಂಗ ಪ್ರಯೋಗ ಜರಗಲಿದೆ.
ಬೆಳಿಗ್ಗೆ ಗಂಟೆ 9.30 ರಿಂದ 1.00 ತನಕ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
ಈ ಶಿಬಿರವನ್ನು ಕರ್ನಾಟಕ ಸರಕಾರದ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶ್ರೀ ಪ್ರಶಾಂತ್ ಜತ್ತನ್ನ ಉದ್ಘಾಟಿಸಲಿದ್ದಾರೆ . ಕಟಪಾಡಿ ಬಹ್ರ್ಮಶ್ರೀ ಮಿಡೀಯಾ ನೆಟ್ವರ್ಕ್ಸ್ ನ ಆಡಳಿತ ನಿರ್ದೇಶಕರಾದ ಶ್ರೀ ಸುನೀಲ್ ಡಿ. ಬಂಗೇರ ಮತ್ತು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ನಿತಿನ್ ಜೆ. ಸಾಲಿಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಕ್ಕೆ ತಾವು ಆಗಮಿಸಿ ಯಶಸ್ವಿಗೊಳಿಸ ಬೇಕೆಂದು ತಮ್ಮಲ್ಲೆರಿಗೂ ಗೌರವಾಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್ , ಅಧ್ಯಕ್ಷರಾದ ಗಿರೀಶ್ ಗುಡ್ಡೆಯಂಗಡಿ, ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತುಲ್ಲ, ಕೋಶಾಧಿಕಾರಿ ಸತೀಶ್ ಡಿ. ಸಾಲಿಯಾನ್ ಇವರಿಂದ ಆತ್ಮೀಯವಾಗಿ ಆಮಂತ್ರಣ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now