
ಕೋಟ: ರಾಜ್ಯದ ಪ್ರತಿಷ್ಠಿತ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅದರ ಉತ್ಕ್ರಷ್ಟ ಸಾಧನೆಗಾಗಿ ಮತ್ತೊಮ್ಮೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಒಲಿದು ಬಂದಿದ್ದು ಕಳೆದ ಆರ್ಥಿಕ ವರ್ಷದ ಪ್ರಗತಿ, ಸಾಲ ನೀಡಿಕೆ, ವಸೂಲಾತಿ ಮತ್ತು ಇತರ ಆರ್ಥಿಕ ಚಟುವಟಿಕೆಗಳನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶನಿವಾರ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶರತ್ ಕುಮಾರ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್ ಮತ್ತು ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now