ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ ಯಶಸ್ವಿ

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ ಯಶಸ್ವಿ
0Shares

ಉಡುಪಿ, ಆಗಸ್ಟ್ 29: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆಯು ಶನಿವಾರ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಪಿ. ಜಗನ್ನಾಥ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಸೌಹಾರ್ದ ಸಹಕಾರಿ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸೌಹಾರ್ದ ಸಹಕಾರಿ ಸಂಘಗಳನ್ನು ಗುರುತಿಸಿ ಗೌರವಿಸಲಾಯಿತು. ಸಹಾಯ ಸೌಹಾರ್ದ ಸಹಕಾರಿ ನಿ., ಸಂತೆಕಟ್ಟೆ, ಉಡುಪಿ ಇದರ ಅಧ್ಯಕ್ಷರಾದ ಶ್ರೀ ರಾಘವೇಂದ್ರ ರಾವ್, ಬ್ರಹ್ಮಾವರ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ., ಬ್ರಹ್ಮಾವರ ಇದರ ಅಧ್ಯಕ್ಷರಾದ ಶ್ರೀ ರವಿನಾಥ್ ಬ್ರಹ್ಮಾವರ, ಮಿತ್ರ ಸೌಹಾರ್ದ ಸಹಕಾರಿ ಸಂಘ ನಿ., ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಹಾಗೂ ತಾಯಿ ಮೂಕಾಂಬಿಕಾ ಸೌಹಾರ್ದ ಸಹಕಾರಿ ಸಂಘ ನಿ., ಬೈಂದೂರು ಇದರ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಬೈಂದೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟವು ಉತ್ತಮ ವ್ಯವಹಾರ ನಡೆಸಿ ಲಾಭದಾಯಕವಾಗಿ ಮುನ್ನಡೆದಿದ್ದು, ಸದಸ್ಯ ಸಹಕಾರಿಗಳ ಸಹಕಾರದಿಂದ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರತಿವರ್ಷ ತಮ್ಮ ಲಾಭಾಂಶದಿಂದ ನಿರ್ದಿಷ್ಟ ಮೊತ್ತವನ್ನು ಜಿಲ್ಲಾ ಒಕ್ಕೂಟಕ್ಕೆ ನೀಡುವ ಮೂಲಕ ಸಹಕಾರ ನೀಡುತ್ತಿರುವ ಜಿಲ್ಲೆಯ ಸೌಹಾರ್ದ ಸಹಕಾರಿ ಸಂಘಗಳನ್ನು ಗುರುತಿಸಿ ಅಭಿನಂದಿಸಲಾಯಿತು.

ವಾರ್ಷಿಕ ಮಹಾಸಭೆಗೆ ಆಗಮಿಸಿ ಸಭೆಯ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಸದಸ್ಯ ಸೌಹಾರ್ದ ಸಹಕಾರಿ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾ ಒಕ್ಕೂಟದ ಆಡಳಿತ ಮಂಡಳಿ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಸೌಹಾರ್ದ ಸಹಕಾರಿ ಕ್ಷೇತ್ರದ ಬೆಳವಣಿಗೆ, ಪರಸ್ಪರ ಸಹಕಾರ ಹಾಗೂ ಸಂಘಗಳ ಮತ್ತಷ್ಟು ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ವಾರ್ಷಿಕ ಮಹಾಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now