ಜೀವನ ಕಟ್ಟಿಕೊಳ್ಳುವ ಶಕ್ತಿ ಕಲೆಯಿಂದ ಸಾಧ್ಯವಿದೆ-ಚಿತ್ರನಟ ಪ್ರಕಾಶ್ ತುಮಿನಾಡ.

ಹೆಮ್ಮಾಡಿ : ಪ್ರತಿಭೆ ಎನ್ನುವುದು ಎಲ್ಲ ವಿದ್ಯಾರ್ಥಿಗಳಲ್ಲೂ ಇರುತ್ತದೆ ಆದರೆ ಪ್ರತಿಭೆಗೆ ಸರಿಯಾದ ವೇದಿಕೆ ಸಿಕ್ಕಾಗ ಮಾತ್ರ ವಿದ್ಯಾರ್ಥಿಗಳ ಪ್ರತಿಭಾ ಶಕ್ತಿಗೆ ದೊಡ್ಡ ಶಕ್ತಿ ಸಿಗುತ್ತದೆ. ಈ ಶಕ್ತಿ ಜನತಾ ಪಿಯು ಕಾಲೇಜಿನಲ್ಲಿ ಸಿಗುತ್ತದೆ ಅದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ವಿ ವಿ ವಿ ಮಂಡಳಿ.ರಿ.ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹೇಳಿದರು
ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ
ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜನತಾ ದಿಬ್ಬಣ
ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದ ಅವರು ವಿದ್ಯಾರ್ಥಿಗಳ ಶ್ರಮ, ಉಪನ್ಯಾಸಕರು ಪ್ರಾಂಶುಪಾಲರ ಪ್ರೋತ್ಸಾಹದಿಂದ ಇಂದು ಜನತಾ ಪಿಯು ಕಾಲೇಜ್ ರಾಜ್ಯ ಮಟ್ಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು.
ಚಿತ್ರ ನಟ ಪ್ರಕಾಶ್ ತುಮಿನಾಡು ಮಾತನಾಡಿ ಪ್ರತಿಭೆಗೆ ಇರುವ ಸೌಂದರ್ಯ ಎಲ್ಲೂ ಇರುವುದಿಲ್ಲ. ಪ್ರತಿಭೆಗೆ ಅಂತ ಶಕ್ತಿ ಇದೆ.ವಿದ್ಯೆಯ ಜೊತೆಗೆ ವಿನಯವನ್ನು ರೂಪಿಸಿಕೊಂಡು ಹೆತ್ತವರನ್ನು ಗೌರವಿಸಿ. ಇಂದು ಕಲೆಯಿಂದ ಹಲವು ಕಡೆ ಜೀವನ ಕಟ್ಟಿಕೊಳ್ಳಲು ಅವಕಾಶ ಇದೆ. ಎಲ್ಲೆಲ್ಲಿ ನಿಮ್ನ ಪ್ರತಿಭೆ ಬೆಳಗಿಸಲು ವೇದಿಕೆ ಸಿಗುತ್ತದೋ ಸಿಕ್ಕಿದ ಅವಕಾಶ ಬಳಸಿಕೊಳ್ಳಿ ಎಂದು ಅವರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಮಾತನಾಡಿ ಅವಕಾಶ ಎನ್ನುವುದು ಇಂದು ಎಲ್ಲ ಕಡೆ ಸಿಗುತ್ತದೆ. ಅವಕಾಶ ಕೇವಲ ಶೈಕ್ಷಣಿಕವಾಗಿ ಮಾತ್ರ ಅಲ್ಲ.ಕಲೆ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದಲ್ಲೂ ಅವಕಾಶ ಇದೆ ಅದಕ್ಕೆ ಜನತಾ ವಿದ್ಯಾ ಸಂಸ್ಥೆ ವೇದಿಕೆ ಕಲ್ಪಿಸಿಕೊಡುತ್ತಿದೆ.ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೆ ನಾವು ಮೊದಲಿನಿಂದಲೂ ಅವಕಾಶ ಮಾಡಿಕೊಟ್ಟಿದ್ದೇವೆ. ವಿದ್ಯಾರ್ಥಿಗಳು ತಮ್ಮ ಸುಪ್ತ ಪ್ರತಿಭೆಯನ್ನು ಇಂದಿನ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡುವುದರ ಮೂಲಕ ಭವಿಷ್ಯದಲ್ಲಿ ಸಾಧಕರಾಗಿ ರೂಪುಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ.ಜನತಾ ಪ್ರೌಢ ಶಾಲೆ ಹೆಮ್ಮಾಡಿಯ ಪ್ರಭಾರ ಮುಖ್ಯ ಶಿಕ್ಷಕರಾದ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಆರು ತಂಡಗಳ ವಿದ್ಯಾರ್ಥಿಗಳು ವೈವಿಧ್ಯಮಯ ಕಾರ್ಯಕ್ರಮ ನೀಡಿ ಬಹುಮಾನ ಪಡೆದು ಸಂಭ್ರಮಿಸಿದರು.
ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಂದಿಸಿದರು. ಉಪನ್ಯಾಸಕರಾದ ಉದಯ ನಾಯ್ಕ ನಿರೂಪಿಸಿದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now