
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಟೈಗರ್ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ.) ಆಯೋಜಿಸಿರುವ 5ನೇ ವರ್ಷದ ‘ಅಬ್ಬರದ ಉಡುಪಿ ಪಿಲಿನಲಿಕೆ’ ಸಾಂಸ್ಕೃತಿಕ ಕಾರ್ಯಕ್ರಮವು ಸೆಪ್ಟೆಂಬರ್ 4ರಂದು ಕುಂಜಿಬೆಟ್ಟಿನಲ್ಲಿ ನಡೆಯಲಿದೆ.
ಕುಂಜಿಬೆಟ್ಟು ಮೀನು ಮಾರುಕಟ್ಟೆ ಸಮೀಪ ನಿರ್ಮಿಸಲಾಗುವ ವಿಶೇಷ ವೇದಿಕೆಯಲ್ಲಿ ಸಂಜೆ 4.30ರಿಂದ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಆಹ್ವಾನಿತ ವಿವಿಧ ತಂಡಗಳ ಭಾಗವಹಿಸುವಿಕೆಯಲ್ಲಿ ಸಾಂಪ್ರದಾಯಿಕ ಹುಲಿವೇಷ ಹಾಗೂ ಕಿನ್ನಿಪಿಲಿ ಸ್ಪರ್ಧೆ ಮತ್ತು ಪ್ರದರ್ಶನಗಳು ನಡೆಯಲಿವೆ ಎಂದು ಟ್ರಸ್ಟ್ ಅಧ್ಯಕ್ಷ ಶಶಿರಾಜ್ ಕುಂದರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಾಸ್ಯ ನಟ ಟೆನ್ನಿಸ್ ಕೃಷ್ಣ, ನಟ ಅರ್ಜುನ್ ಕಾಪಿಕಾಡ್, ನಟಿ ಸುಕೃತ ವಾಗ್ಲೆ, ಜ್ಯೂನಿಯರ್ ಮಾಡೆಲ್ ಸಚಿತಾ ರಾವ್, ಮಾಡೆಲ್ ಸ್ಪೂರ್ತಿ ಶೆಟ್ಟಿ, ನಟಿ ರೂಪಾ ವರ್ಕಾಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ‘ಟಾಸ್’ ಹಾಗೂ ‘ಬನ’ ಚಿತ್ರತಂಡಗಳ ಸದಸ್ಯರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now