ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್; 3 ಡ್ರೋನ್ ತಂಡ, 45 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ; ಏಳು ಕಡೆ ವಾಹನ ನಿಲುಗಡೆ ವ್ಯವಸ್ಥೆ

ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್; 3 ಡ್ರೋನ್ ತಂಡ, 45 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ; ಏಳು ಕಡೆ ವಾಹನ ನಿಲುಗಡೆ ವ್ಯವಸ್ಥೆ
0Shares

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಮಹೋತ್ಸವದ ಬಂದೋಬಸ್ತ್‌ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್‌ಪಿಗಳು, ಆರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 25 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 35 ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 186 ಹೆಡ್ ಕಾನ್‌ಸ್ಟೆಬಲ್‌, ಪೊಲೀಸ್ ಕಾನ್‌ಸ್ಟೆಬಲ್‌ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತು 50 ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಹೆಚ್ಚುವರಿ ಭದ್ರತೆಗಾಗಿ ಒಂದು ಕೆಎಸ್‌ಆರ್‌ಪಿ ತುಕಡಿ, ಒಂಬತ್ತು ಡಿಎಆರ್ ತುಕಡಿಗಳು, ಮೂರು ಅಗ್ನಿಶಾಮಕ ದಳದ ತಂಡಗಳು, ಎರಡು ಆಂಬ್ಯುಲೆನ್ಸ್‌ಗಳು ಹಾಗೂ ಮೂರು ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now