ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ
0Shares

ಉದ್ಯಾವರ: ಕೊಂಕಣಿ ಕಲಾ ಮತ್ತು ಸಾಂಸ್ಕೃತಿಕ ಸಂಘಟನೆ, ಉಡುಪಿ ಜಿಲ್ಲೆ ಹಾಗೂ ICYM ಉದ್ಯಾವರ ಸಹಯೋಗದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ ಸೆಪ್ಟೆಂಬರ್ 6, 2026ರಂದು ಉದ್ಯಾವರದ ಸೈಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಕೊಂಕಣಿ ಹಾಡು, ನೃತ್ಯ ಮತ್ತು ಕವಿತಾ ವಾಚನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಉದ್ಯಾವರ ಚರ್ಚ್ ವ್ಯಾಪ್ತಿಯ 15 ವಾರ್ಡ್‌ಗಳ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ.

ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ. 10,000, ದ್ವಿತೀಯ ರೂ. 8,000 ಹಾಗೂ ತೃತೀಯ ರೂ. 6,000 ನೀಡಲಾಗುವುದು. ಅತ್ಯುತ್ತಮ ಕಾರ್ಯಕ್ರಮ ನಿರೂಪಕರಿಗೆ ವಿಜೇತರಿಗೆ ರೂ. 1,000 ನಗದು ಬಹುಮಾನವೂ ಇರಲಿದೆ.

ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಉತ್ತೇಜನದ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊಂಕಣಿ ಭಾಷಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now