ವಿಶ್ವ ಭೌತಚಿಕಿತ್ಸಾ ದಿನ – ಜಾಗೃತಿ ಕಾರ್ಯಕ್ರಮ ವರದಿ

ವಿಶ್ವ ಭೌತಚಿಕಿತ್ಸಾ ದಿನ – ಜಾಗೃತಿ ಕಾರ್ಯಕ್ರಮ ವರದಿ
0Shares

ಉಡುಪಿ ಸೆಪ್ಟೆಂಬರ್ 09: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೌತಚಿಕಿತ್ಸೆ ಯ ದಿನಾಚರಣೆ( ಸೆಪ್ಟೆಂಬರ್ 08 ರಿಂದ 15 ) ರ ಉದ್ಘಾಟನಾ ಸಮಾರಂಭವನ್ನು ರುಡ್ ಸೆಟ್ ಸಂಸ್ಥೆ ಬ್ರಹ್ಮಾವರ ದಲ್ಲಿ ಹಮ್ಮಿಕೊಳ್ಳಲಾಯಿತು.

ವಿಶ್ವ ಭೌತಚಿಕಿತ್ಸಾ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಖUಆSಇಖಿ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಡಾ. ಲತಾ ನಾಯಕ್, ಆಐಔ ಮತ್ತು ಏಚಿಃಊI ಕಾರ್ಯಕ್ರಮದ ನೋಡಲ್ ಅಧಿಕಾರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು ಪಾರ್ಶ್ವವಾಯು ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಕುರಿತು ಮಾತನಾಡಿದರು. ಅಲ್ಲದೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರವನ್ನು ಶ್ಲಾಘಿಸಿದರು.

ನಂತರ ಕಭೀ ಕಾರ್ಯಕ್ರಮ ದ ಕುರಿತು ಹಾಗೂ ಪಾರ್ಶ್ವವಾಯು (ಸ್ಟ್ರೋಕ್) ತಡೆಗಟ್ಟುವಿಕೆ ಮತ್ತು ಹೃದಯರಕ್ತನಾಳದ ಆರೋಗ್ಯದ ಕುರಿತು ಸಾರ್ವಜನಿಕ ಜಾಗೃತಿ ಅಧಿವೇಶನ ನಡೆಯಿತು. ಈ ಅಧಿವೇಶನದಲ್ಲಿ ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿಯಲ್ಲಿ ಭೌತಚಿಕಿತ್ಸಕರ ಮಹತ್ವದ ಪಾತ್ರದ ಬಗ್ಗೆ ಮಾಹಿತಿ ನೀಡಲಾಯಿತು. ಜಿಲ್ಲಾಸ್ಪತ್ರೆ ಯಲ್ಲಿನ ಬ್ರೈನ್ ಹೆಲ್ತ್ ಕ್ಲಿನಿಕ್ ನಾ ಸಿಬ್ಬಂದಿ ಹಾಗೂ ದೊರಕುವ ಸೌಲಭ್ಯ ಗಳ ಬಗ್ಗೆ ಮಾಹಿತಿ ಯನ್ನು ಜಿಲ್ಲಾ ಸಂಯೋಜಕರಾದ ಶ್ರೀಮತಿ ಅರ್ಪಿತಾ ಬ್ರಹ್ಮಾವರ, ಭೌತಚಿಕಿತ್ಸಕರು ಕುಮಾರಿ ಯಶಸ್ವಿನಿ ವಿ ಹಾಗೂ ಕುಮಾರಿ ಹೇಮಾ ಪಿ ಯವರು ತಿಳಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now