
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರಿನ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಯುವತಿ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಅವರ ಪುತ್ರಿ ಲಿಶ್ಚಿತ ಗೌಡ (20) ಎಂದು ತಿಳಿದು ಬಂದಿದೆ.
ಈಕೆ ನಡ ಸರ್ಕಾರಿ ಕಾಲೇಜ್ ನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಘಟನೆಯ ಕುರಿತು ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now