
ಉಡುಪಿ ಸೆಪ್ಟಂಬರ್ 13 (ಕ.ವಾ):ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿಯನ್ನು ತರಬೇಕೆಂದು ಶುಭ ಹಾರೈಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಪೂರ್ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವಿಕೆಯು ವ್ಯಕ್ತಿತ್ವ ವಿಕಸನ ರೂಪುಗೊಳ್ಳಲು ಸಾಧ್ಯ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಇವುಗಳಿಗೆ ಗಮನಹರಿಸದೆ ಕ್ರೀಡೆಗಳಲ್ಲಿ ಸಮಾನ ಮನಸ್ಥಿತಿಯಿಂದ ಭಾಗವಹಿಸಬೇಕು. ಕ್ರೀಡೆಯಿಂದ ಶಿಸ್ತು, ಆತ್ಮ ವಿಶ್ವಾಸ, ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳಬಹುದಾಗಿದೆ ಎಂದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ನಿರೂಪಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now