ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸರಕಾರದ ಗಂಭೀರ ಚಿಂತನೆ : ಸಚಿವ ತಂಗಡಗಿ

ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸರಕಾರದ ಗಂಭೀರ ಚಿಂತನೆ : ಸಚಿವ ತಂಗಡಗಿ
0Shares

ಬೆಂಗಳೂರು: ತುಳು ಭಾಷೆಗೆ ಕರ್ನಾಟಕ ರಾಜ್ಯದ 2ನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ಚೌಕಟ್ಟಿನೊಳಗೆ ಕ್ರಮ ಕೈಗೊಳ್ಳಲು ಪೂರಕ ಪ್ರಯತ್ನ ನಡೆಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿ, ತುಳು ಭಾಷೆ ಇತಿಹಾಸ, ಸಾಹಿತ್ಯ ಪರಂಪರೆ, ಲಿಪಿ, ಪ್ರಾಚೀನ ಮತ್ತು ಆಧುನಿಕ ಸಾಹಿತ್ಯ, ಸಂಸ್ಕೃತಿ ಹಾಗೂ ತುಳು ಶಾಸನಗಳ ಕುರಿತು ಸಮಗ್ರ ಅಧ್ಯಯನ ನಡೆಸಲು ಡಾ.ಮೋಹನ್‌ ಆಳ್ವ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ತಜ್ಞರ ಸಮಿತಿ 2023ರ ಫೆ.14ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದಿದ್ದಾರೆ

ಮುಂದುವರಿದ ಹಂತವಾಗಿ, 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿರುವ ಮಾದರಿ ಅಧ್ಯಯನಕ್ಕೆ ನಮ್ಮ ಸರ್ಕಾರವು 2025ರಲ್ಲಿ ಅಧ್ಯಯನ ತಂಡವನ್ನು ರಚಿಸಿತ್ತು.

ತಂಡವು 19 ಮತ್ತು 20 ಜನವರಿ 2026ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕೃತ ಭಾಷಾ ವ್ಯವಸ್ಥೆ, ಕಾನೂನು ಚೌಕಟ್ಟು ಹಾಗೂ ಅನುಷ್ಠಾನದ ಮಾದರಿ ಪರಿಶೀಲಿಸಿ, ಮಾರ್ಚ್ 2026ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದು ಹೇಳಿದ್ದಾರೆ.

ತುಳು ನಮ್ಮ ಕರಾವಳಿಯ ಭಾಷೆ ಮಾತ್ರವಲ್ಲ. ಅದು ಕರ್ನಾಟಕದ ಶ್ರೀಮಂತ ಭಾಷಾ-ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗ ಎಂದಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now