ಉಡುಪಿ ಉಚ್ಚಿಲ ದಸರಾ : ಅಬ್ಬರದ ಪಿಲಿ ಪಂಥ 2026 ಸೀಸನ್ – 1

ಉಡುಪಿ ಉಚ್ಚಿಲ ದಸರಾ : ಅಬ್ಬರದ ಪಿಲಿ ಪಂಥ 2026 ಸೀಸನ್ – 1
0Shares

ಉಡುಪಿ ಉಚ್ಚಿಲ ದಸರಾ ಸಮಿತಿ : ” ಅಬ್ಬರದ ಪಿಲಿ ಪಂಥ 2026 ಸೀಸನ್ – 1″,

ಉಡುಪಿ : ಉಚ್ಚಿಲ ದಸರ ಉತ್ಸವದ ಪ್ರಯುಕ್ತ ಅಕ್ಟೋಬರ್ 18 ರಂದು ಪ್ರಪ್ರಥಮ ಬಾರಿಗೆ ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನ ವತಿಯಿಂದ “ಅಬ್ಬರದ ಪಿಲಿ ಪಂಥ 2026 SEASON 1”, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರ ಉತ್ಸವದ ಮುಖ್ಯ ವೇದಿಕೆಯಲ್ಲಿ ಅಕ್ಟೋಬರ್ 18 ಆದಿತ್ಯವಾರದಂದು ಬೆಳಿಗ್ಗೆ ಗಂಟೆ 10:30 ರಿಂದ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸ್ಪರ್ಧೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರತಿಷ್ಠಿತ ಆಹ್ವಾನಿತ 10 ತಂಡಗಳು ಭಾಗವಹಿಸಲಿದೆ. ಪ್ರಥಮ ಬಹುಮಾನ 3,00,000 ನಗದು + ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 2,00,000 ನಗದು + ಆಕರ್ಷಕ ಟ್ರೋಫಿ ತೃತೀಯ ಬಹುಮಾನ 1,00,000 ನಗದು + ಆಕರ್ಷಕ ಟ್ರೋಫಿ ಸಹಿತ 3 ವೈಯಕ್ತಿಕ ವಿಭಾಗಗಳಲ್ಲಿ ತಲಾ ₹10,000 ನಗದು ಬಹುಮಾನವನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ₹25,000 ಪ್ರೋತ್ಸಾಹಧನ ನೀಡಲಾಗುವುದು.

ಕರಾವಳಿ ಕರ್ನಾಟಕದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿ ಕುಣಿತ ಕಲೆಗೆ ಹೊಸ ವೇದಿಕೆ ಹಾಗೂ ಪ್ರೋತ್ಸಾಹ ನೀಡುವ ಈ ವಿಶಿಷ್ಟ ಕಾರ್ಯಕ್ರಮ ಕರಾವಳಿಯ ಜನಪದ ಮತ್ತು ಸಾಂಸ್ಕೃತಿಕ ಕಲೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡಲು ಸಂಘಟಕರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now