ಚಿರಂತನ ಶಿಕ್ಷಣ ಸಂಸ್ಥೆಗಳು ಕೋಟೇಶ್ವರ -: ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಅಶೋಕ ತೆಕ್ಕಟ್ಟೆ ಅವರಿಗೆ ಕೋಟೇಶ್ವರದ ಚಿರಂತನ ಶಿಕ್ಷಣ ಸಂಸ್ಥೆಗಳಲ್ಲಿ ಸನ್ಮಾನ.

ಚಿರಂತನ ಶಿಕ್ಷಣ ಸಂಸ್ಥೆಗಳು ಕೋಟೇಶ್ವರ -: ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಅಶೋಕ ತೆಕ್ಕಟ್ಟೆ ಅವರಿಗೆ ಕೋಟೇಶ್ವರದ ಚಿರಂತನ ಶಿಕ್ಷಣ ಸಂಸ್ಥೆಗಳಲ್ಲಿ ಸನ್ಮಾನ.
0Shares

ಕೋಟೇಶ್ವರ: ಕುಂದಾಪುರ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸ್ಕುತುರು ಇಲ್ಲಿನ ಶಿಕ್ಷಕರಾದ ಅಶೋಕ ತೆಕ್ಕಟ್ಟೆ ಅವರು 2026ನೇ ಸಾಲಿನ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ, ಕೋಟೇಶ್ವರದ ಚಿರಂತನ ಶಿಕ್ಷಣ ಸಂಸ್ಥೆಗಳ ವತಿಯಿಂದ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ಅವರ ಗಣನೀಯ ಸೇವೆ, ನವೀನ ಬೋಧನಾ ವಿಧಾನಗಳು, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಹಾಗೂ ವಿವಿಧ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
ಸನ್ಮಾನ ಸಮಾರಂಭದ ಅತಿಥಿಗಳಾದ ,ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ ಮಾತನಾಡಿ, ಅಶೋಕ ತೆಕ್ಕಟ್ಟೆಯವರ ಶೈಕ್ಷಣಿಕ ಸೇವೆ ಹಾಗೂ ಸಾಧನೆಗಳು ಇತರ ಶಿಕ್ಷಕರಿಗೆ ಪ್ರೇರಣೆಯಾಗಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಬೆಳೆಸುವಲ್ಲಿ ಹಾಗೂ ಹೊಸತನದ ಬೋಧನಾ ಪ್ರಯೋಗಗಳನ್ನು ಅಳವಡಿಸುವಲ್ಲಿ ಅವರು ವಹಿಸಿರುವ ಪಾತ್ರ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಚಿರಂತನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಶ್ರೀಮತಿ ಸುಲೋಚನಾ ಸರ್ವೋತ್ತಮ ಶೆಟ್ಟಿ, ನಿರ್ದೇಶಕಿ ಡಾ|ಚಿಂತನ ರಾಜೇಶ್, ಅಕಾಡೆಮಿಕ್ ಲೀಡ್ ವಿಲ್ಮಾ ಡಿ ಸಿಲ್ವಾ, ಪ್ರಾಂಶುಪಾಲೆ ವಿನುತ ಬಿ ಶೆಟ್ಟಿ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಅಶೋಕ ತೆಕ್ಕಟ್ಟೆಯವರನ್ನು ಅಭಿನಂದಿಸಿ ಅವರ ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now