
ಪುತ್ತೂರು, ಸೆ. 22: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಎನ್ಸಿಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ 19ಕರ್ನಾಟಕ ಬೆಟಾಲಿಯನ್, ಮಡಿಕೇರಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿ, ಅದನ್ನು ಸಾಧಿಸುವ ನಿಟ್ಟಿನಲ್ಲಿ ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು, ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರದೆ, ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಮಾಡಬೇಕು. ಯಾವುದೇ ಕಾರ್ಯವನ್ನು ಆರಂಭಿಸಿದ ಬಳಿಕ ಮಧ್ಯದಲ್ಲೇ ಕೈಬಿಡದೆ, ನಿರಂತರ ಪ್ರಯತ್ನದ ಮೂಲಕ ಯಶಸ್ಸಿನತ್ತ ಸಾಗಬೇಕು, ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. =

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now