
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ
ಚುನಾವಣಾ ಆಯುಕ್ತ (ಸಿಇಸಿ)ಜ್ಞಾನೇಶ್ ಕುಮಾರ್ ಅವರನ್ನು ತತ್ ಕ್ಷಣ ಬಂಧಿಸಬೇಕು, ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಅವರ ನೇತೃತ್ವದಲ್ಲಿ ಕೈಗೊಂಡಿರುವ ಎಲ್ಲ ನಿರ್ಧಾರಗಳು ಮತ್ತು ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳ ಬಗ್ಗೆ ಸ್ವತಂತ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿ ಸೆ.25ರಂದು ರಾಜ್ಯ ಚುನಾವಣಾ ಆಯೋಗದ ಕಚೇರಿಗಳ ಎದುರು ಪ್ರತಿಭಟನಾ ಮೆರವಣಿಗೆ ನಡೆಸುವಂತೆ ಕಾಂಗ್ರೆಸ್ ತನ್ನ ರಾಜ್ಯ ಘಟಕಗಳಿಗೆ ಗುರುವಾರ ಸೂಚಿಸಿದೆ.
ಇದೇ ರೀತಿಯಲ್ಲಿ ಸೆ.28ರಂದು ಎಲ್ಲ ಜಿಲ್ಲಾ ಕಾಂಗ್ರೆಸ್ ಸಮಿತಿಗಳು (ಡಿಸಿಸಿಗಳು) ತಮ್ಮ ವ್ಯಾಪ್ತಿಯ ಜಿಲ್ಲಾಧಿಕಾರಿ ಕಚೇರಿಗಳವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿವೆ ಎಂದು ಕಾಂಗ್ರೆಸ್ ತಿಳಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮಾತನಾಡಿ, ‘ಬಿಜೆಪಿ ನಿಯಂತ್ರಿತ ಸಿಇಸಿ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಮತ ಕಳವು ವಿರುದ್ಧ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲ ದಿನದಿಂದಲೂ ಧ್ವನಿ ಎತ್ತುತ್ತಿದ್ದಾರೆ ಎಂದು ಹೇಳಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now