ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
0Shares

ಮೂಡುಬಿದಿರೆ: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್‌ ಹನ್ನೆರಡು ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಆಳ್ವಾಸ್‌ ತಂಡವು ಪುರುಷರ ಮತ್ತು ಮಹಿಳೆಯರ ವಿಭಾಗದ ಕಬಡ್ಡಿ, ಖೋ-ಖೋ, ಬಾಲ್ ಬ್ಯಾಡ್ಮಿಂಟನ್, ಕುಸ್ತಿ, ಅಥ್ಲೆಟಿಕ್ಸ್‌ ಹಾಗೂ ಯೋಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.

ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್‌ನಲ್ಲಿ ಒಟ್ಟು 16 ಚಿನ್ನ, 17 ಬೆಳ್ಳಿ, 1 ಕಂಚು, ಕುಸ್ತಿಯಲ್ಲಿ ಒಟ್ಟು 10 ಚಿನ್ನ, 10 ಬೆಳ್ಳಿ, 5 ಕಂಚು, ಯೋಗಾಸನ ಸ್ಪರ್ಧೆಯಲ್ಲಿ ಒಟ್ಟು 5 ಚಿನ್ನ, 8 ಬೆಳ್ಳಿ 3 ಕಂಚು ಪದಕವನ್ನು ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now