
ಕುಂದಾಪುರ, ಸೆ.25: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಕಟ್ಬೆಲ್ತೂರು ಗ್ರಾಮದ ನಿವಾಸಿ ರಾಘವೇಂದ್ರ ಜೋಗಿ (48) ಅವರು ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡಿರುವ ಘಟನೆ ಸೆ.24ರಂದು ನಡೆದಿದೆ.
ರಾಘವೇಂದ್ರ ಜೋಗಿ ಅವರು ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೆ.24ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
ಕೂಡಲೇ ಸ್ಥಳೀಯರು ಅವರನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ತನ್ನ ಸಾವಿಗೆ ತಾನೇ ಕಾರಣ’ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಯಕ್ತಿಕ ಸಮಸ್ಯೆ ಅಥವಾ ಇತರ ಯಾವುದೇ ಕಾರಣದಿಂದ ಮನನೊಂದು ಅವರು ಈ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗಿದ್ದು, ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.
ಮೃತರ ಸಹೋದರ ರಾಜೇಶ್ ಜೋಗಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಲಂ 194ರ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now