
ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ರಿ. ಉಡುಪಿ ಜಿಲ್ಲಾ ಘಟಕ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ತಾಲೂಕು,ಹೋಟೆಲ್ ಮಥುರಾ ಉಡುಪಿ,ಕರ್ನಾಟಕ ಶಿಕ್ಷಣ ಸಮನ್ವಯ ಮತ್ತು ತರಬೇತಿ ಚಾರಿಟೇಬಲ್ ಟ್ರಸ್ಟ್ ರಿ. ಕರ್ನಾಟಕ ಇವರ ಸಹಯೋಗದಲ್ಲಿ ಉಡುಪಿ ತಾಲೂಕಿನ ಸರಕಾರಿ ಶಾಲೆಗಳ ಎಸ್ ಡಿ ಎಂ ಸಿ ಸದಸ್ಯರ ತರಬೇತಿ ಕಾರ್ಯಗಾರ ಉಡುಪಿಯ ಹೋಟೆಲ್ ಮಥುರಾ ಸಭಾಂಗಣದಲ್ಲಿ ನಡೆಯಿತು,
ಜಿಲ್ಲಾ ಸಮಿತಿಯ ಗೌರವ ಸಲಹೆಗಾರರಾದ ಮಲ್ಲಿಕಾ ಬಿ. ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು,
ವಳಕಾಡು ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಡಾ. ವಿರುಪಾಕ್ಷ ಕೆ.ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,
ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿ
ಸರಕಾರಿ ಶಾಲೆ, ಎಸ್ ಡಿ ಎಂ ಸಿ ಮತ್ತು ಗುಣಮಟ್ಟದ ಶಿಕ್ಷಣ ಕುರಿತು ಮಾತನಾಡಿ
ಎಸ್ ಡಿ ಎಂ ಸಿ ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿ
ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಹೇಳಿದರು,

ಜಿಲ್ಲಾ ಸಮಿತಿಯ ಸದಸ್ಯರು ಸಂಪನ್ಮೂಲ ವ್ಯಕ್ತಿಗಳಾದ ಅಶ್ಪಾಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು,
ಅಶ್ವತ್ ಕುಮಾರ್ ಆಶಯ ಗೀತೆ ಹಾಡಿದರು,
ಎಸ್. ವಿ. ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದರು,
ವೇದಿಕೆಯಲ್ಲಿ ಜಿಲ್ಲಾ ಸಮಿತಿಯ ಸದಸ್ಯರುಗಳಾದ ಯುವರಾಜ್, ತಾಲೂಕು ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ನೂತನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು,
ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಡಾ, ವಿರೂಪಾಕ್ಷ ಕೆ. ಸರ್ವಾನುಮತದಿಂದ ಆಯ್ಕೆಯಾದರು, ಉಪಾಧ್ಯಕ್ಷರಾಗಿ ರವಿ ಕುಮಾರ್, ಹಾಗೂ ಪ್ರವೀಣಿ ಸಿ.ಶೆಟ್ಟಿ, ಕಾರ್ಯದರ್ಶಿಯಾಗಿ ಝಾಹಿದ, ಜೊತೆ ಕಾರ್ಯದರ್ಶಿಯಾಗಿ ಹರಿಣಾಕ್ಷಿ, ಕೋಶಾಧಿಕಾರಿಯಾಗಿ ಯುವರಾಜ ಸಾಲಿಯಾನ್ ಅವಿರೋಧವಾಗಿ ಆಯ್ಕೆಯಾದರು,ಉಳಿದಂತೆ ಹನ್ನೆರಡು ಮಂದಿ ಕ್ರೀಯಾಶೀಲ ಸದಸ್ಯರು ಸಂಘಟನ ಕಾರ್ಯದರ್ಶಿ ಗಳಾಗಿ ಆಯ್ಕೆ ಯಾದರು,
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now