ಬೆಳಗಾವಿ | ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ | ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು
0Shares

ಬೆಳಗಾವಿ: ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ.

ಮಚ್ಛೆ ಗ್ರಾಮದ ವಿಶ್ವೇಶ್ ನಾಯಕ್ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ವಿಶ್ವೇಶ್ ಗಣಪತಿ ವಿಸರ್ಜನೆ ಮಾಡಲು ತಮ್ಮ ಸ್ನೇಹಿತರೊಂದಿಗೆ ಜೊತೆ ತೆರಳಿದ್ದ. ಗಣಪತಿ ವಿಸರ್ಜನೆ ಮಾಡಿ ವಾಪಾಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸ್ನೇಹಿತರ ಎದುರೇ ಯುವಕ ಪ್ರಾಣಬಿಟ್ಟಿದ್ದು, ಕೆರೆಯಲ್ಲಿ ಮುಳುಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯಾಚರಣೆ ನಡೆಸಿ, ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now