ಯೋಗ ಕ್ಷೇತ್ರದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ವಿಕಾಸ್‌ಗೆ ವಿಶ್ವ ದಾಖಲೆ ಗೌರವ

ಯೋಗ ಕ್ಷೇತ್ರದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ವಿಕಾಸ್‌ಗೆ ವಿಶ್ವ ದಾಖಲೆ ಗೌರವ
0Shares

ಮೂಡುಬಿದಿರೆ: ಸರ್ವಾಂಗಾಸನದಲ್ಲಿ ನಿರಂತರವಾಗಿ ಆಸನ ನಿರ್ವಹಿಸಿದ ಸಾಧನೆಗಾಗಿ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್‌ನ ತೃತೀಯ ವರ್ಷದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ವಿದ್ಯಾರ್ಥಿ ಪಿ.ಕೆ. ವಿಕಾಸ್‌ರವರು ಬುಕ್ ಆಫ್ ವರ್ಲ್ಡ ರೆಕಾರ್ಡ್ಸನಿಂದ ವಿಶ್ವ ದಾಖಲೆಯ ಮಾನ್ಯತೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ವಿಕಾಸ್‌
ರವರು ಐದನೇ ತರಗತಿಯಿಂದಲೇ ಯೋಗಾಭ್ಯಾಸ ಆರಂಭಿಸಿದ್ದು, ಕಳೆದ 11 ವರ್ಷಗಳಿಂದ ನಿರಂತರವಾಗಿ ಯೋಗವನ್ನು ಅಭ್ಯಾಸ ಮಾಡುತ್ತಿದ್ದಾರೆ.
ಸರ್ವಾಂಗಾಸನದ ಪ್ರದರ್ಶನದಲ್ಲಿ ಸಮತೋಲನ, ದೈಹಿಕ ಸಾಮರ್ಥ್ಯ, ನಮ್ಯತೆ, ಸ್ಥಿರತೆ, ಏಕಾಗ್ರತೆ ಹಾಗೂ ಸಹನಶಕ್ತಿ
ಯನ್ನು ಸಮರ್ಥವಾಗಿ ಪ್ರದರ್ಶಿಸಿರುವುದಾಗಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಯೋಗ ಕ್ಷೇತ್ರದಲ್ಲಿ ಹಲವು ಗಮನಾರ್ಹ ಸಾಧನೆಗಳನ್ನು ಮಾಡಿರುವ ವಿಕಾಸ್ ಅವರು, 2023, 2024 ಹಾಗೂ 2025
ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಯೋಗ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
2022ರಲ್ಲಿ ನಡೆದ ಡಬ್ಲ್ಯುಎಫ್‌ಎಫ್ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

      2024ರಲ್ಲಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.  
       2025ರಲ್ಲಿ ನಡೆದ  ಎಯಾನ್ ವೈದ್ಯಕೀಯ ಸಂಸ್ಥೆಯ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.        
   ಇದಕ್ಕೂ ಮೊದಲು 2017 ಮತ್ತು 2018ರಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿಕಾಸ್, 2021ರಲ್ಲಿ ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದರು. 
            ಸ್ಪರ್ಧೆಗಳಲ್ಲಿ ಸಾಧನೆ ಮಾಡುವುದರೊಂದಿಗೆ ಯೋಗ ಸ್ಪರ್ಧೆಗಳ ನಿರ್ಣಾಯಕರಾಗಿಯೂ ವಿಕಾಸ್ ಸೇವೆ ಸಲ್ಲಿಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now