
ಮುಂಬೈ: ಲಾರಿ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಏಳು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ (ಅ.2) ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ಪಿಕಪ್ ವಾಹನದಲ್ಲಿ ಭಕ್ತರು ದುರ್ಗಾ ದೇವಿಯ ಮೂರ್ತಿಯೊಂದಿಗೆ ವಾರ್ಧಾಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಧಾಮಂಗಾಂವ್ ರೈಲ್ವೆ ನಿಲ್ದಾಣದ ಸಮೀಪ ಸಮೃದ್ಧಿ ಮಹಾಮಾರ್ಗದಲ್ಲಿ ಪಿಕಪ್ ವ್ಯಾನ್ ಚಲಿಸುತ್ತಿದ್ದಾಗ ಹಿಂದಿನಿಂದ ಬಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಭಕ್ತರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಒಟ್ಟು 21 ಜನರು ಗಾಯಗೊಂಡಿದ್ದಾರೆ. ಸುಮಾರು 14 ರಿಂದ 15 ಜನರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪೈಕಿ 4-5 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now