
ಉಡುಪಿ, ಅಕ್ಟೋಬರ್ 02 : ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಿತ್ಯ ಜೀವನದಲ್ಲಿ ಪಾಲಿಸಬೇಕೆಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕಿನ ಗಾಂಧಿ ಕಟ್ಟೆಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಉಡುಪಿ ಇವರ ಸಹಯೋಗದಲ್ಲಿ ಆಯೋಜಿಸಿಲಾದ ಜಿಲ್ಲಾಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸ್ವಾತಂತ್ರ ಪೂರ್ವದಲ್ಲಿ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸ ಹೋರಾಟ ದಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು,
ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಉಡುಪಿಯ ನಗರದ ಅಜ್ಜರಕಾಡುವಿಗೆ ಭೇಟಿ ನೀಡಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಒಂದೆಡೆ ಸೇರಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಕರೆ ನೀಡಿದ್ದರು.
ಅವರ ಸವಿನೆನಪಿಗಾಗಿ ಇಲ್ಲಿ ಗಾಂಧೀಜಿಯವರ ಪುತ್ಥಳ್ಳಿಯನ್ನು ಭುಜಂಗಶೆಟ್ಟಿ ಪಾರ್ಕಿನಲ್ಲಿ ನಿರ್ಮಾಣ ಮಾಡಲಾಗಿದೆ ಹಾಗೂ ಜಿಲ್ಲಾ ಆಟದ ಮೈದಾನಕ್ಕೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಇಡಲಾಗಿದೆ ಎಂದರು.

ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನದ ಕಾರ್ಯಕ್ರಮವನ್ನು ರಾಷ್ಟ್ರದಾದ್ಯಂತ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ದೇಶದ ಎಲ್ಲೆಡೆ ಸ್ವಚ್ಛ ಭಾರತ ಅಭಿಯಾನವನ್ನು ಆಯೋಜಿಸಿದರು. ವಿಶ್ವದ ಎಲ್ಲಾ ರಾಷ್ಟ್ರಗಳು ಸಹ ಇದನ್ನು ಅನುಸರಿಸುತ್ತಿದ್ದಾರೆ ಎಂದ ಅವರು, ಉಡುಪಿ ನಗರವನ್ನು ಸ್ವಚ್ಛ ನಗರವನ್ನಾಗಿಸಲು ಎಲ್ಲರೂ ಕೈಜೋಡಿಸೋಣ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಮಾತನಾಡಿ, ನಮ್ಮ ರಾಷ್ಟ್ರಪಿತರಾದ ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ ಮಾರ್ಗವನ್ನು ಅನುಸರಿಸಿ ಎಲ್ಲಾ ವರ್ಗದ ಜನರನ್ನು ಒಟ್ಟುಗೂಡಿಸುವುದರೊಂದಿಗೆ ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಅವರ ತ್ಯಾಗವನ್ನು ನಾವೆಲ್ಲರೂ ಸ್ಮರಿಸಲೇಬೇಕು ಎಂದ ಅವರು , ಗಾಂಧೀಜಿಯವರ ಆಶಯದಂತೆ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಅವರ ಕನಸನ್ನು ನನಸು ಮಾಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮ ದಿನಾಚರಣೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ನಗರಸಭಾ ಆಯುಕ್ತ ಮಹಾಂತೇಶ್ ಹಂಗರಗಿ ,ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್.ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now