9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
0Shares

Karkala: (esamayanews) ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ನಾಲ್ಕು ಪ್ರಕರಣಗಳಲ್ಲಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಿವಮೊಗ್ಗ ವೆಂಕಟೇಶ್ ಎಂದು ತಿಳಿದು ಬಂದಿದೆ.
ಕಾರ್ಕಳ ಎಸಿಜೆ ಮತ್ತು ಜೆಎಂಎಫ್‌ಇಸಿ ನ್ಯಾಯಾಲಯದ ನಾಲ್ಕು ಪ್ರಕರಣಗಳ ವಾರೆಂಟ್ ಆರೋಪಿ ಶಿವಮೊಗ್ಗ ವೆಂಕಟೇಶ್ ಎಂಬಾತ 2009ರಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಯಾಗಿದ್ದನು ಎಂದು ತಿಳಿದು ಬಂದಿದೆ.

ಆ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ 4 ಪ್ರಕಾರಣಗಳನ್ನು ನ್ಯಾಯಾಲಯದಲ್ಲಿ ಎಲ್‌ಪಿಸಿ ಪ್ರಕರಣವಾಗಿ ವಾರೆಂಟ್ ಜಾರಿಯಲ್ಲಿತ್ತು.

ಈ ನಡುವೆ ಪೊಲೀಸರು 2017ರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾ ಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಮತ್ತೆ ಜಾಮೀನು ಪಡೆದುಕೊಂಡು ಬಿಡುಗಡೆಯಾದ ವೆಂಕಟೇಶ್ ನ್ಯಾಯಾಲಯಕ್ಕೆ ಸುಮಾರು 9 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಅ.3ರಂದು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು, ಅ.4ರಂದು ಕಾರ್ಕಳ ನ್ಯಾಯಾಲಯ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯಾಯಾಲಯವು ಆರೋಪಿಗೆ ಅ.17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now