
ಬಾರ್ಕೂರು: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲ್ಪನಾಶಕ್ತಿ ಮತ್ತು ಪರಿಣಾಮಕಾರಿ ಸಂವಹನ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಇತ್ತೀಚೆಗೆ ‘Add-Venture’ ಜಾಹೀರಾತು ಸ್ಪರ್ಧೆಯನ್ನು ಆಯೋಜಿಸಲಾಯಿತು. “Where Ideas Turn to Impact” ಎಂಬ ಆಶಯದೊಂದಿಗೆ ಹಮ್ಮಿಕೊಳ್ಳಲಾಯಿತು

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ಮಾತನಾಡುತ್ತಾ, “ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಜ್ಞಾನಕ್ಕೆ ಸೀಮಿತಗೊಳ್ಳದೆ, ನೂತನ ಆಲೋಚನೆಗಳನ್ನು ಮೈಗೂಡಿಸಿಕೊಂಡು ಅವುಗಳನ್ನು ಸಮಾಜದ ಮುಂದೆ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು” ಎಂದು ಹೇಳಿದರು.

ತೀರ್ಪುಗಾರರಾಗಿ ಆಗಮಿಸಿದ್ದ ಕುಂದಾಪುರದ ಸುಜ್ಞಾನ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಮಥ್ ಶೆಟ್ಟಿ ಮಾತನಾಡಿ, “ಜಾಹೀರಾತು ಎಂದರೆ ಕೇವಲ ಉತ್ಪನ್ನದ ಪರಿಚಯವಲ್ಲ, ಅದೊಂದು ಉತ್ತಮ ಆಲೋಚನೆಯನ್ನು ಜನರ ಮನಸ್ಸಿಗೆ ತಲುಪಿಸುವ ಕಲೆ” ಎಂದು ಅಭಿಪ್ರಾಯಪಟ್ಟರು. ಮತ್ತೋರ್ವ ತೀರ್ಪುಗಾರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿ ಎಂದು ತಿಳಿಸಿ, ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಉದ್ಘಾಟನಾ ಸಮಾರಂಭದ ಬಳಿಕ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿವಿಧ ನವೀನ ಉತ್ಪನ್ನಗಳು ಹಾಗೂ ಪರಿಕಲ್ಪನೆಗಳನ್ನು ಆಧರಿಸಿ ಆಕರ್ಷಕ ಜಾಹೀರಾತುಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ವಿಜಯಲಕ್ಷ್ಮಿ ಸ್ವಾಗತಿಸಿದರೆ, ಸ್ವಾತಿ ವಂದನಾರ್ಪಣೆ ಸಲ್ಲಿಸಿದರು ಮತ್ತು ರಜನಿ ಕಾರ್ಯಕ್ರಮವನ್ನು ನಿರೂಪಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now