
ಗೋವಾದಲ್ಲಿನ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಗುರುವಾರ ನಿಧನರಾಗಿದ್ದಾರೆ. ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಾನಾ ಪಾಟೇಕರ್ ಅವರು ಬೆಳಗ್ಗೆ 5.20ಕ್ಕೆ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.
ಆಸ್ಪತ್ರೆಗೆ ಕರೆತಂದ ಬಳಿಕ ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ (CPR) ನೀಡಿ ಅವರನ್ನು ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದಾರೆ.
ಈ ಕುರಿತು ಮೆಡಿಕೋ-ಲೀಗಲ್ ಪ್ರಕರಣ (MLC) ದಾಖಲಿಸಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now