ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೆಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೆಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
0Shares

ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಅಪ್ಟಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದಾರೆ

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್‌ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now