
ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಸರ್ಕಾರಿ ಪ್ರೌಢಶಾಲೆ, ಕಲ್ಯಾ, ಕಾರ್ಕಳ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಲ್ಯಾ ಸರ್ಕಾರಿ ಪ್ರೌಢಶಾಲೆಯಲ್ಲಿ ಅಕ್ಟೋಬರ್ 1 ರಂದು ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಉಚಿತ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನೀಲ ತಿ ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ, ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಲ್ಯಾ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮ ಮೊಗೇರ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರವೀಂದ್ರ ನಾಯ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now