
ಉದ್ಯಾವರ : ಇಲ್ಲಿಯ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಪಂಚ ಗ್ಯಾರಂಟಿ ಸಂಭ್ರಮೋತ್ಸವವನ್ನು ನಾಳೆ ಅಕ್ಟೋಬರ್ 10ರಂದು ಉದ್ಯಾವರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಿತಿನ್ ಜೆ. ಸಾಲಿಯನ್ ತಿಳಿಸಿದ್ದಾರೆ.
ಉದ್ಯಾವರ ಮಠದಂಗಡಿಯ ಕೆನರಾ ಬ್ಯಾಂಕ್ ಬಳಿ ನಡೆಯಲಿರುವ ಈ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಕಾಂಗ್ರೆಸ್ ಮುಖಂಡ ನಾಗೇಶ್ ಕುಮಾರ್ ಉದ್ಯಾವರ ಮತ್ತು ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.
ರಾಜ್ಯ ಸರ್ಕಾರದ ವಿಶೇಷ ಯೋಜನೆಗಳಾಗಿರುವ ಉಚಿತ ವಿದ್ಯುತ್, ಗೃಹಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ ಮತ್ತು ಸ್ತ್ರೀ ಶಕ್ತಿ ಇದರ ಫಲಾನುಭವಿಗಳನ್ನು ಒಟ್ಟುಗೂಡಿಸಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಉದ್ಯಾವರ ಗ್ರಾಮದ ನೂರಾರು ಕಾರ್ಯಕರ್ತರು, ವಿಶೇಷವಾಗಿ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now