
ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಮತ್ತು ನೌಕಾ ಅಕಾಡೆಮಿ (ಎನ್ಎ) ಪ್ರವೇಶ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅದ್ವೈತ್ ವಿಕ್ರಾಂತ್ ಶಿಂಧೆ ಅರ್ಹತೆ ಪಡೆದುಕೊಂಡು
ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಎನ್ಡಿಎ ಪರೀಕ್ಷೆಯ ಸಿದ್ಧತೆಗಾಗಿ ಕಾಲೇಜಿನ ವತಿಯಿಂದ ವಿಶೇಷ ತರಬೇತಿ, ಅಣಕು ಪರೀಕ್ಷೆಗಳು ಹಾಗೂ ಮಾರ್ಗದರ್ಶನ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.
ಈ ಪರೀಕ್ಷೆಯ ಮೂಲಕ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ದೊರೆಯುತ್ತದೆ.
ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now