
ಇನೋವಾ ಕಾರಿನ ಸೀಟ್ಗಳೊಳಗೆ ಗಾಂಜಾ ಅಡಗಿಸಿ ಸಾಗಾಟ; ಕುಂಬಳಗೋಡು ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳು ವಶಕ್ಕೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದ್ದು, ಕುಂಬಳಗೋಡು ಪೊಲೀಸರು ಕಾರ್ಯಾಚರಣೆ ನಡೆಸಿ ಬರೋಬ್ಬರಿ 317 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಕೇರಳ ಹಾಗೂ ಒಡಿಶಾ ರಾಜ್ಯಗಳಿಂದ ಬೆಂಗಳೂರಿಗೆ ಗಾಂಜಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಇನೋವಾ ಕಾರಿನ ಸೀಟ್ಗಳ ಒಳಭಾಗದಲ್ಲಿ ಗಾಂಜಾವನ್ನು ಅಡಗಿಸಿಟ್ಟು ನಗರಕ್ಕೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಪತ್ತೆಹಚ್ಚಿದ್ದಾರೆ.
ಕಾರಿನ ಸೀಟ್ಗಳೊಳಗೆ ಗಾಂಜಾ ಅಡಗಿಸಿ ಸಾಗಾಟ..!!
ಪೊಲೀಸರ ಕಣ್ಣುತಪ್ಪಿಸಲು ಆರೋಪಿಗಳು ಇನೋವಾ ಕಾರಿನ ಸೀಟ್ಗಳ ಒಳಗೆ ಗಾಂಜಾವನ್ನು ಬಚ್ಚಿಟ್ಟು ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆ ವೇಳೆ ಕಾರಿನೊಳಗೆ ಅಡಗಿಸಿಟ್ಟಿದ್ದ 317 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಕುಂಬಳಗೋಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗಾಂಜಾ ಸಾಗಾಟದ ಹಿಂದಿರುವ ಜಾಲ, ಮಾದಕ ವಸ್ತುಗಳ ಮೂಲ ಹಾಗೂ ಬೆಂಗಳೂರಿನಲ್ಲಿ ಯಾರಿಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂಬುದರ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now