
ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜೊತೆಗೆ ಸಮಾಜಸೇವೆ, ಶಿಸ್ತು ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವುದು ಅತ್ಯಂತ ಮಹತ್ವದ್ದು. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ವೇದಿಕೆಯಾಗಿವೆ.
ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕದ ವತಿಯಿಂದ ಕಾಪುವಿನ ಮಹಾದೇವಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದೆನು.
ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಕಲಿತ ಸೇವಾ ಮನೋಭಾವ ಮತ್ತು ಶಿಸ್ತು ತಮ್ಮ ಮುಂದಿನ ಜೀವನದಲ್ಲಿಯೂ ಸಮಾಜದ ಒಳಿತಿಗೆ ಪೂರಕವಾಗಲಿ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now