
ಬ್ರಹ್ಮಾವರ: ಕರ್ನಾಟಕ ಪಬ್ಲಿಕ್ ಸ್ಕೂಲ್, ಬ್ರಹ್ಮಾವರದ ವಿದ್ಯಾರ್ಥಿ ಗೌತಮ್ ಆಚಾರ್ಯ ಅವರು ವಾಲಿಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಅಮೃತ ಭಾರತಿ ವಿದ್ಯಾಸಂಸ್ಥೆಯನ್ನು ಪ್ರತಿನಿಧಿಸಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಗೌತಮ್ ಆಚಾರ್ಯ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಮಹೇಶ್ ಆಚಾರ್ಯ ಮತ್ತು ವಿಶಾಲಾಕ್ಷಿ ಬೈಕಾಡಿ ದಂಪತಿಯ ಪುತ್ರ ಗೌತಮ್ ಅವರ ಸಾಧನೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪಿಟಿಎ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now