
ಆನೇಕಲ್: ಪಟ್ಟಣದ ವಿವಿಧ ಮೆಡಿಕಲ್ ಶಾಪ್ಗಳಿಗೆ ಪಿಎಸ್ಐ ಮುನಿರತ್ನಮ್ಮ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಯಾವುದೇ ಕಾರಣಕ್ಕೂ ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಇಲ್ಲದೆ ಔಷಧಿಗಳನ್ನು ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಾಥಮಿಕ ತಪಾಸಣೆ ಹಾಗೂ ವೈದ್ಯರ ಸೂಕ್ತ ಸಲಹೆ ಇಲ್ಲದೆ ಔಷಧಿಗಳನ್ನು ವಿತರಿಸುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮೆಡಿಕಲ್ ಶಾಪ್ ಮಾಲೀಕರಿಗೆ ಮನವರಿಕೆ ಮಾಡಿಕೊಟ್ಟರು. ವಿಶೇಷವಾಗಿ ಯುವ ಜನತೆಯನ್ನು ದಾರಿ ತಪ್ಪಿಸುವ ಯಾವುದೇ ರೀತಿಯ ನಶೆ ಬರುವ ಅಥವಾ ಅಮಲಿನ ಔಷಧಗಳನ್ನು ನೇರವಾಗಿ ಯಾರಿಗೂ ಮಾರಾಟ ಮಾಡಬಾರದು ಎಂದು ಅವರು ತಾಕೀತು ಮಾಡಿದರು.
ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಔಷಧಿಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಮೆಡಿಕಲ್ ಶಾಪ್ಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಪರವಾನಗಿ ರದ್ದುಪಡಿಸಲು ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now