ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು

ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು
0Shares

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುತ್ತೂರಿನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಮೃತರನ್ನು ನೆಲ್ಯಾಡಿಯಲ್ಲಿ ಪ್ಲವರ್ಸ್ ಹೋಟೆಲ್‌ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ ಅಶ್ವಿನ್ ಜೋಜೋ ಜೋರ್ಜ್ (16) ಎಂದು ಗುರುತಿಸಲಾಗಿದೆ.

ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now