
ಚಿತ್ರದುರ್ಗ: 2004ರಲ್ಲಿ ಖಾಸಗಿ ಬಸ್ ಪ್ರಯಾಣಿಕರನ್ನು ಬೆದರಿಸಿ ದರೋಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೊಳಕಾಲ್ಮೂರು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ವಾಸವಿದ್ದ ಭಾಸ್ಕರ್ ಅಲಿಯಾಸ್ ಯರಿಸ್ವಾಮಿ (49) ಬಂಧಿತ ಆರೋಪಿ.
ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿ ಏಳು ಮಂದಿ ಸೇರಿ ಖಾಸಗಿ ಬಸ್ ತಡೆದು, ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಚಿನ್ನಾಭರಣ, ವಾಚ್ ಹಾಗೂ ವಿಸಿಪಿ ಪ್ಲೇಯರ್ ದೋಚಿದ್ದರು ಎಂಬ ಆರೋಪವಿದೆ
ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದಲ್ಲಿ ಕಾರ್ಯಾಚರಣೆ..!!
ಮೊಳಕಾಲ್ಮೂರು ಠಾಣೆಯ ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದ ತಂಡ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ. ವಿಚಾರಣೆ ವೇಳೆ ಆಂಧ್ರಪ್ರದೇಶದಲ್ಲಿ ನಡೆದ ಮತ್ತೊಂದು ದರೋಡೆ ಪ್ರಕರಣದಲ್ಲೂ ಆರೋಪಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ ಎಂದು ಚಿತ್ರದುರ್ಗ ಎಸ್ಪಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now